NMMSS Scholarship 2026: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯವು ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಸಾಧನೆ ಹಾಗೂ ಆದಾಯ ಆಧಾರಿತ ವಿದ್ಯಾರ್ಥಿವೇತನ ಯೋಜನೆಯನ್ನು ಅಂದರೆ ಎನ್‌ಎಂಎಂಎಸ್ ಜಾರಿಗೆ ತಂದಿದೆ. ಎಂಟನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣವನ್ನು ಪೂರ್ಣಗೊಳಿಸಲು ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ವಿದ್ಯಾರ್ಥಿವೇತನದ ಮೊತ್ತ
ಈ ಯೋಜನೆಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಒಟ್ಟು ನಾಲ್ಕು ವರ್ಷಗಳ ಕಾಲ ಅಂದರೆ 9 ನೇ ತರಗತಿಯಿಂದ 12 ನೇ ತರಗತಿಯವರೆಗೆ ಪ್ರತಿ ವರ್ಷ 12,000 ರೂಪಾಯಿ ಆರ್ಥಿಕ ನೆರವು ಸಿಗಲಿದೆ. ಪ್ರತಿ ತಿಂಗಳು 1000 ರೂಪಾಯಿಯಂತೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ದೇಶಾದ್ಯಂತ ಒಟ್ಟು 1 ಲಕ್ಷ ಅರ್ಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು
ಪ್ರಸ್ತುತ ಸರ್ಕಾರಿ, ಅನುದಾನಿತ ಅಥವಾ ಸ್ಥಳೀಯ ಸಂಸ್ಥೆಗಳ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. 7 ನೇ ತರಗತಿಯಲ್ಲಿ ಕನಿಷ್ಠ ಶೇಕಡಾ 55 ರಷ್ಟು ಅಂಕಗಳನ್ನು ಪಡೆದಿರಬೇಕು. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಶೇಕಡಾ 5 ರಷ್ಟು ವಯೋಸಡಿಲಿಕೆ ಇರುತ್ತದೆ. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3,50,000 ರೂಪಾಯಿ ಮೀರಬಾರದು. ವಸತಿ ಶಾಲೆಗಳು, ಕೆಂದ್ರೀಯ ವಿದ್ಯಾಲಯ ಮತ್ತು ನವೋದಯ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
ಪರೀಕ್ಷಾ ವಿಧಾನ
ಎನ್‌ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಅಭ್ಯರ್ಥಿಗಳನ್ನು ರಾಜ್ಯ ಮಟ್ಟದ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯು ಎರಡು ವಿಭಾಗಗಳನ್ನು ಹೊಂದಿರುತ್ತದೆ. ಮೊದಲನೆಯದು ಮಾನಸಿಕ ಸಾಮರ್ಥ್ಯ ಪರೀಕ್ಷೆ ಅಂದರೆ ಮ್ಯಾಟ್ ಮತ್ತು ಎರಡನೆಯದು ಶೈಕ್ಷಣಿಕ ಸಾಮರ್ಥ್ಯ ಪರೀಕ್ಷೆ ಅಂದರೆ ಸ್ಯಾಟ್. ಪ್ರತಿಯೊಂದು ಪರೀಕ್ಷೆಯು 90 ಅಂಕಗಳಿಗೆ ಇರಲಿದ್ದು, ಬಹು ಆಯ್ಕೆಯ ಪ್ರಶ್ನೆಗಳನ್ನು ಹೊಂದಿರುತ್ತದೆ. ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಸಾಮಾನ್ಯ ವರ್ಗದವರು ಕನಿಷ್ಠ ಶೇಕಡಾ 40 ಮತ್ತು ಮೀಸಲಾತಿ ವರ್ಗದವರು ಕನಿಷ್ಠ ಶೇಕಡಾ 32 ರಷ್ಟು ಅಂಕಗಳನ್ನು ಪಡೆಯಬೇಕು.
ಅಗತ್ಯವಿರುವ ದಾಖಲೆಗಳು
7 ನೇ ತರಗತಿಯ ಅಂಕಪಟ್ಟಿ, ಪೋಷಕರ ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಅಂಗವಿಕಲತೆ ಪ್ರಮಾಣಪತ್ರ ಹಾಗೂ ವಿದ್ಯಾರ್ಥಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳು ಬೇಕಾಗುತ್ತವೆ.
ಅರ್ಜಿ ಸಲ್ಲಿಸುವ ವಿಧಾನ
ಸಂಬಂಧಪಟ್ಟ ರಾಜ್ಯ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ರಾಷ್ಟ್ರೀಯ ಸ್ಕಾಲರ್‌ಶಿಪ್ ಪೋರ್ಟಲ್ ಎನ್‌ಎಸ್‌ಪಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶಾಲೆಯ ಮುಖ್ಯೋಪಾಧ್ಯಾಯರ ಮೂಲಕ ದಾಖಲೆಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.
APPLY LINK – CLICK HERE